Home ತಾಜಾ ಸುದ್ದಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

0

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಜೊತೆಗಿದ್ದರು. ಇದಕ್ಕೂ ಮುನ್ನ ಅವರು ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಮಂಡ್ಯ ವಿವಿ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಹಲವು ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೈಸೂರು ಅಭ್ಯರ್ಥಿ ಯದುವೀರ್, ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.

Exit mobile version