Home ನಮ್ಮ ಜಿಲ್ಲೆ ಮಂತ್ರಾಲಯದ ಶ್ರೀಮಠದಲ್ಲಿ ಲಕ್ಷ ದೀಪೋತ್ಸವ

ಮಂತ್ರಾಲಯದ ಶ್ರೀಮಠದಲ್ಲಿ ಲಕ್ಷ ದೀಪೋತ್ಸವ

0

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸಹಯೋಗದಲ್ಲಿ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಮಧ್ವಮಾರ್ಗ(ಕಾರಿಡಾರ್)ದಲ್ಲಿ ಭಾನುವಾರ ಸಂಜೆ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ತಿಕ ಮಾಸದ ಅಂಗವಾಗಿ ಆಯೋಜಿಸಿದ್ದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯದ ಹಣಕಾಸು ವಿಶೇಷ ಮುಖ್ಯ ಕಾರ್ಯದರ್ಶಿ ರಾಮಕೃಷ್ಣರಾವ್ ಹಾಗೂ ಶ್ರೀಮಠದ ವಿದ್ವಾಂಸರು, ಶ್ರೀಮಠದ ವ್ಯವಸ್ಥಾಪಕ ಎಸ್.ಕೆ ಶ್ರೀನಿವಾಸರಾವ್, ಪಂಡಿತರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Exit mobile version