ಮಕ್ಕಳಿಬ್ಬರ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

0
6

ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಹಳ್ಳಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಳನ್ನು ಬೋಮ್ಮನಹಳ್ಳಿಯ ಯಲ್ಲವಾ ಕರಿಹೊಳ(೩೦) ಎಂದು ಗುರುತಿಸಲಾಗಿದೆ. ಇವರು ತಮ್ಮೊಂದಿಗೆ ಪುತ್ರ ಸ್ವಾತಿಕ(೫), ಮುತ್ತಪ್ಪ(೧) ಇಬ್ಬರನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Previous articleಗಣೇಶೋತ್ಸವ ಹತ್ತಿಕ್ಕಲು ವ್ಯವಸ್ಥಿತ ಸಂಚು
Next article೧೨೦೦ ಕೋಟಿ ಇರುವವರು ಉಭಯ ಪಕ್ಷದಲ್ಲಿದ್ದಾರೆ