ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

0
18

ನವದೆಹಲಿ: ಗಾಂಧಿ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಮಕ್ಕಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯ ನಡೆಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಇಂದು ನಿಮ್ಮ ಸುತ್ತಮುತ್ತಲಿನ ಸ್ವಚ್ಛತೆಗೆ ಸಂಬಂಧಿಸಿದ ಅಭಿಯಾನದ ಭಾಗವಾಗುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ನಿಮ್ಮ ಈ ಉಪಕ್ರಮವು ‘ಸ್ವಚ್ಛ ಭಾರತ’ದ ಉತ್ಸಾಹವನ್ನು ಮತ್ತಷ್ಟು ಬಲಪಡಿಸುತ್ತದೆ.
ಸ್ವಚ್ಛ ಭಾರತ ಅಭಿಯಾನ ಶುರುವಾಗಿ 10 ವರ್ಷಗಳು ಕಳೆದಿದ್ದು, ಸ್ವಚ್ಛ ಭಾರತದ ಉತ್ಸಾಹವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿದ್ದಾರೆ.

ರಾಜ್​ಘಾಟ್​ನಲ್ಲಿ ಮಹತ್ಮಾ ಗಾಂಧಿ ಸಮಾಧಿಗೆ ಪುಷ್ಪನಮನ: ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಈ ಕುರಿಥಂತೆ ಸಾಮಾಜಿಕ ಜಾಲತಾಣ ಪೋಸ್ಟ್ ಮಾಡಿದ್ದ ಮೋದಿಯವರು, ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ ಎಂದಿದ್ದಾರೆ.

Previous articleರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಿಂದ ಮೂವರು ರಿಲೀಸ್
Next articleಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರು ಸಾವು