Home ಅಪರಾಧ ಮಗು ದತ್ತು ಪ್ರಕರಣ: ಸೋನು ಶ್ರೀನಿವಾಸ್ ಗೌಡ ಬಂಧನ

ಮಗು ದತ್ತು ಪ್ರಕರಣ: ಸೋನು ಶ್ರೀನಿವಾಸ್ ಗೌಡ ಬಂಧನ

0

ಬೆಂಗಳೂರು: ರೀಲ್ಸ್ ರಾಣಿ ಎಂದೆ ಖ್ಯಾತಿಯಾಗಿರುವ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಅರೆಸ್ಟ್ ಮಾಡಿ, ಎಫ್‌ಐಆರ್ ದಾಖಲು ಮಾಡಿದ್ದಾರೆ. ದತ್ತು ತೆಗೆದುಕೊಳ್ಳುವ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ, ನಟಿ ಸೋನು ಶ್ರೀನಿವಾಸ್‌ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆಯುತ್ತಿದ್ದು, ಮಗುವನ್ನು ದತ್ತು ಪಡೆದಿರುವುದರ ಬಗ್ಗೆ ಮಾಹಿತಿ ಕೇಳಿದ್ದಾರೆ. ರಾಯಚೂರು ಮೂಲದ 8 ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದು, ತಮ್ಮ ಮನೆಯಲ್ಲೇ ಇರಿಸಿಕೊಂಡಿದ್ದರು. ಆದರೆ, ನಟಿ ಸೋನು ಶ್ರೀನಿವಾಸ್‌ ಗೌಡ ಅವರು ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಎದುರಾಗಿತ್ತು.

Exit mobile version