Home ತಾಜಾ ಸುದ್ದಿ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು

ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು

0

ಬೆಂಗಳೂರು: ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದಿದ್ದಾರೆ.

Exit mobile version