ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು

0
38

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದ್ದು, ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಯಾವುದೇ ಮೂಲಸೌಕರ್ಯ ಕಲ್ಪಿಸಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ಬಳಿ ನಾಯಕರು ಬರುತ್ತಾರೆ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ.

Previous articleಮತದಾನ ಮಾಡಿದ ಡಿಕೆ ಸಹೋದರರು
Next articleಕೋಟ್ಯಾಧಿಪತಿಗಳ ಸಂಪತ್ತು ಬಡ ಜನರಿಗೆ ಹಂಚಿಕೆ