ಮತದಾನದ ವೇಳೆ ಮಣಿಪುರದಲ್ಲಿ ಹಿಂಸಾಚಾರ

0
11

ಮಣಿಪುರ:  ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದೆ,
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿ ಹೋಗಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ, ಘಟನೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಸುತ್ತ ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಣಿಪುರದಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ ಇದರ ಹೊರತಾಗಿಯೂ ದುಷ್ಕರ್ಮಿಗಳು ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಥಮನ್‌ಪೋಕ್ಪಿಯಲ್ಲಿ ಗುಂಡಿನ ದಾಳಿ ನಡೆಸಿ ಇವಿಎಂ ಮೆಷಿನ್ ಒಡೆದು ಹಾಕಿದ್ದಾರೆ ಎನ್ನಲಾಗಿದೆ. ಮಣಿಪುರದಲ್ಲಿ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

Previous articleಯೇ ಲೋಕಲ್ ಕನ್ನಡ್ ವಾಲಾ ಹೇ: ‘ಕನ್ನಡ ಮಾತಾಡೋದೆ ತಪ್ಪಾ’
Next articleನೇಹಾ ಕೊಲೆ ಪ್ರಕರಣ: ಫಯಾಜ್ ಮನೆಗೆ ಪೊಲೀಸ್ ಭದ್ರತೆ