ಮತಾಂತರ ಕೃತ್ಯ: ಪ್ರಮೋದ್ ಮುತಾಲಿಕ್ ಆಕ್ರೋಶ

0
24
ಮುತಾಲಿಕ್‌

ಚಿಕ್ಕೋಡಿ(ಬೆಳಗಾವಿ) : ಕಾಂಗ್ರೆಸ್ ಸರ್ಕಾರ ಮತಾಂತರ ಕಾಯ್ದೆ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿರುವುದೇ ಮತಾಂತರಕ್ಕೆ ಕಾರಣವಾಗಿದೆ ಎಂದು ಪ್ರಮೋದ ಮುತಾಲಿಕ್‌ ಹೇಳಿದ್ದಾರೆ.
ಬೆಳಗಾವಿ ಓಬಳಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯಿಂದ ಮತಾಂತರ ನಡೆಯುತ್ತಿದೆ ಎಂಬ ಆರೋಪ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಯಲ್ಲಿದ್ದರೂ ಮತಾಂತರ ಮಾತ್ರ ಎಗ್ಗಿಲ್ಲದೆ ನಡೆಯುತ್ತಿದೆ. ಸೋನಿಯಾ ಗಾಂಧಿಯನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ ಎಂದು ಶ್ರೀರಾಮ ಸೇನೆ ಸಂಚಾಲಕ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ. ಒತ್ತಾಯಪೂರ್ವಕವಾಗಿ ಮತಾಂತರ ಆದವರನ್ನು ಹಿಂದೂ ಧರ್ಮಕ್ಕೆ ತರಬೇಕು, ಇಲ್ಲದಿದ್ದರೆ ದೊಡ್ಡ ಪ್ರಮಾಣದ ಹೋರಾಟ ಮಾಡುವುದಾಗಿ ಪ್ರಮೋದ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯನ್ನು ಬಂಧಿಸಿ ಸಸ್ಪೆಂಡ ಮಾಡಬೇಕು ಎಂದು ಆಗ್ರಹಿಸಿದರು.

Previous articleಮಧು ಬಂಗಾರಪ್ಪ ಕಾರು ಅಪಘಾತ: ಸಚಿವರು ಅಪಾಯದಿಂದ ಪಾರು
Next articleನಾಮಫಲಕದಲ್ಲಿ ಕನ್ನಡವಿರಲೇಬೇಕು