Home ತಾಜಾ ಸುದ್ದಿ ಮತಾಂಧ ರಾಕ್ಷಸರನ್ನು ಮಟ್ಟಹಾಕಲು ಅಗ್ರಹ

ಮತಾಂಧ ರಾಕ್ಷಸರನ್ನು ಮಟ್ಟಹಾಕಲು ಅಗ್ರಹ

0
Ashok

ಬೆಂಗಳೂರು: ಮತಾಂಧ ರಾಕ್ಷಸರನ್ನು ಮಟ್ಟಹಾಕಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಹೋದರಿ ನೇಹಾ ಪ್ರಕಾರದಲ್ಲಿ ನಡೆದ ದುರ್ಘಟನೆಯನ್ನೇ ಅರಗಿಸಿಕೊಳ್ಳಲಾಗದ ಕನ್ನಡಿಗರಿಗೆ ಈಗ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಆಘಾತ ಎದುರಾಗಿದೆ.
ಹುಬ್ಬಳ್ಳಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮುಸ್ಲಿಂ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿರುವ ಅಮಾನುಷ ಘಟನೆ ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಹಾವಳಿಗೆ ಮತ್ತೊಂದು ನಿದರ್ಶನವಾಗಿದೆ.
ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ, ತುಷ್ಟೀಕರಣದಿಂದ ರಾಜ್ಯದಲ್ಲಿ ತಾಲಿಬಾನಿ ಸಂಸ್ಕೃತಿ ನಿರ್ಮಾಣವಾಗುತ್ತಿದ್ದು ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ಎದುರಾಗಿದೆ.
ಹಿಂದೂ ಹೆಣ್ಣುಮಕ್ಕಳ ಜೀವಕ್ಕೆ ಕಂಟಕವಾಗಿರುವ ಈ ಲವ್ ಜಿಹಾದ್ ಜಾಲವನ್ನು ಗಂಭೀರವಾಗಿ ಪರಿಗಣಿಸಬೇಕು, ಗುಪ್ತಚರ ಇಲಾಖೆ ಹಾಗು ಪೊಲೀಸ್ ಇಲಾಖೆಯ ವಿಶೇಷ ತಂಡ ರಚಿಸಿ ಈ ಮತಾಂಧ ರಾಕ್ಷಸರನ್ನು ಮಟ್ಟಹಾಕಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ
ಸಿದ್ದರಾಮಯ್ಯ ಹಾಗು ಗೃಹ ಸಚಿವ ಡಾ. ಪರಮೇಶ್ವರ ಅವರನ್ನು ಅಗ್ರಹಿಸುತ್ತೇನೆ ಎಂದಿದ್ದಾರೆ.

Exit mobile version