ಬೆಂಗಳೂರು: ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅವಿನಾಭಾವ ಸಂಬಂಧದ ಕಥೆ ಹೇಳಿದ ಚಿತ್ರ ‘ನಾನು ಮತ್ತು ಗುಂಡ’ ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಈಗ ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ -2’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದು. ಈ ಚಿತ್ರದಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಶ್ವಾನ ಸಿಂಬಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದೆ. ರಚನಾ ಇಂದರ್ ಪ್ರಮುಖ ಪಾತ್ರ ವಹಿಸಿದ್ದಾರೆ .ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿನಿಮಾ ಕನ್ನಡ ಮಾತ್ರವಲ್ಲದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದ್ದು ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ, ಆರ್.ಪಿ.ಪಟ್ನಾಯಕ್ ಅವರ ಸಂಗೀತ ಹಾಗೂ ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ ಈ ಸಿನಿಮಾಗಿದೆ. ಇಂದು ‘ನಾನು ಮತ್ತು ಗುಂಡ -2’ ಚಿತ್ರದ ಟೀಸರ್ ಅನಾವರಣಗೊಂಡಿದೆ