ಮತ್ತೋರ್ವ ಬಾಣಂತಿ ಸಾವು

0
36

ಚಿಕ್ಕಮಗಳೂರು: ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ನಗರದ ಶಂಕರಪುರ ನಿವಾಸಿ ಸವಿತಾ (26) ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು, ಎರಡು ದಿನದ ಬಳಿಕ ಬಾಣಂತಿ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸೌಲಭ್ಯವಿಲ್ಲವೆಂದು ವೈದ್ಯರು ಹೇಳಿದ ಹಿನ್ನಲೆ ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವಿಗೀಡಾಗಿದ್ದಾರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸಿಜರಿನ್ ಮಾಡುವ ವೇಳೆ ವೈದ್ಯರು ಬಿ.ಪಿ., ಶುಗರ್ ಪರೀಕ್ಷೆ ಮಾಡಿಲ್ಲವೆಂದು ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲೆ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

Previous articleವರ್ಷ ಪೂರೈಸಿ ಉತ್ಸಾಹದಿಂದ ಮೋದಿ ಭೇಟಿಯಾದ ವಿಜಯೇಂದ್ರ
Next articleಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು…