ಬಳ್ಳಾರಿ: ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದ ಬಂಗಾರಿ ಹನುಮಂತು ಸಂಡೂರು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ. ಸಂಡೂರು ಕ್ಷೇತ್ರದ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಬಿಜೆಪಿ ನಾಯಕರು ಈ ಚುನಾವಣೆಯನ್ನ ಒಗ್ಗಟ್ಟಿನಿಂದ ಎದುರಿಸಿದ್ದೇವೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದೆ. ಸಿಎಂ ಸಿದ್ದರಾಮಯ್ಯ ಮೂರು ದಿನ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಮತದಾರರು ಬಿಜೆಪಿಗೆ ಆಶಿರ್ವಾದ ಮಾಡಿದ್ದಾರೆ ಎನ್ನುವ ವಿಶ್ವಾಸವಿದೆ ಎಂದ ಅವರು, 14 ವರ್ಷಗಳ ಬಳಿಕ ಜನಾರ್ಧನರೆಡ್ಡಿ ಜಿಲ್ಲೆಗೆ ಬಂದಿರುವುದು ನಮಗೆ ಅನುಕೂಲ ಆಗಿದೆ. ಜನಾರ್ಧನರೆಡ್ಡಿ ಶ್ರೀರಾಮುಲು ಕೆಎಸ್ ದಿವಾಕರ್ ಸೇರಿ ರಾಜ್ಯ ನಾಯಕರು ಸಾಕಷ್ಟು ಪ್ರಚಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದೆ ಗೆಲ್ಲಲಿದೆ ಅನ್ನೋ ವಿಶ್ವಾಸ ಇದೆ ಎಂದರು.