ಮದಕ್ಕೆ ಕರುಣೆ ಇಲ್ಲ

0
19

ಬೆಂಗಳೂರು: ಇನ್‌ಸ್ಟಗ್ರಾಮ್‌ನಲ್ಲಿ ತನ್ನ ಆಪ್ತ ಗೆಳತಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ತಮ ಅಭಿಮಾನಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಚಿತ್ರನಟ ದರ್ಶನ್ ಬಗ್ಗೆ ನವರಸ ನಾಯಕ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಮದಕ್ಕೆ ಕಾರುಣ್ಯದ ಅರಿವಿಲ್ಲ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೇ ಇರುವುದಿಲ್ಲ ಎಂದು ಟ್ವೀಟ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನೂ ಕೊಲ್ಲುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಅವರು ದರ್ಶನ್ ಬಗ್ಗೆಯೇ ಟ್ವೀಟ್ ಮಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಕರ್ಮ ಜೀವನ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ ಎಲ್ಲಾ ಕರ್ಮಕ್ಕೂ ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ ಎಂದು ಬರೆದಿದ್ದಾರೆ.

Previous articleಕೊಲೆ ನಂತರ ಕ್ರಿಮಿನಲ್ ಐಡಿಯಾ ಕೊಟ್ಟಿದ್ದೇ ಪೊಲೀಸ್ ಅಧಿಕಾರಿ
Next articleಅತ್ತೆಯನ್ನು ೯೫ ಬಾರಿ ಇರಿದು ಕೊಂದಿದ್ದ ಸೊಸೆಗೆ ಗಲ್ಲು ಶಿಕ್ಷೆ