Home ತಾಜಾ ಸುದ್ದಿ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ನಡೆಯದ ಬಂದ್

ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ನಡೆಯದ ಬಂದ್

0

ದಾವಣಗೆರೆ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಉಪಟಳ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಮಧ್ಯ ಕರ್ನಾಟಕ ಕೇಂದ್ರ ಬಿಂದು ದಾವಣಗೆರೆಯಲ್ಲಿ ಪ್ರತಿಭಟನೆ ಹೊರತುಪಡಿಸಿದರೆ, ಬಂದ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಬಸ್ ಕಂಡಕ್ಟರ್ ಮೇಲೆ ಹಲ್ಲೇ ಸೇರಿದಂತೆ ಗಡಿ ತಗಾದೆ ತೆಗೆಯುತ್ತಿರುವ ಎಂಇಎಸ್ ಪುಂಡಾಟಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಆದರೆ ದಾವಣಗೆರೆಯಲ್ಲಿ ಯಾವುದೇ ಬಂದ್ ನಡೆಯದೆ ಎಂದಿನಂತೆ ಅಂಗಡಿ, ಮುಂಗಟ್ಟುಗಳು, ಹೋಟೆಲ್ ಗಳ ಬಾಗಿಲು ತೆಗೆದಿದ್ದವು. ಆಟೋ, ಬಸ್ ಗಳ ಸಂಚಾರ ಎಂದಿನಂತೆ ಇತ್ತು. ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಜರಾಗಿದ್ದರು.
ರಣ ಬಿಸಿಲಿಗೆ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕಿರುವುದನ್ನು ಬಿಟ್ಟರೆ, ಬಂದ್ ಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಂದ್ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ರಸ್ತೆಯವೊಂದರಲ್ಲಿ ಟೈರ್ ಗೆ ಬೆಂಕಿ ಹಚ್ಚಿದ್ದರು.
ಆದರೂ ಕೆಲವು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಬೆಳಗ್ಗೆ 11.45ರ ಸುಮಾರಿನಲ್ಲಿ ಪ್ರತಿಭಟನೆ ನಡೆಸಿ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಲವು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಬೇರೆಡೆ ಸಾಗಿಸಿದರು.

Exit mobile version