Home ಅಪರಾಧ ಮನೆಯಲ್ಲಿ ವೇಶ್ಯಾವಾಟಿಕೆ: ಆರೋಪಿ ಬಂಧನ

ಮನೆಯಲ್ಲಿ ವೇಶ್ಯಾವಾಟಿಕೆ: ಆರೋಪಿ ಬಂಧನ

0

ಉಡುಪಿ: ಕಾರ್ಕಳ ಸಮೀಪದ ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ.
ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿ, ಸಾಣೂರು ನಿವಾಸಿ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಸಾರ್ವಜನಿಕರು ಆರೋಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಎಸ್‌ಐ ಜಯಶ್ರೀ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿ, ವಿಜಯಕುಮಾರ್‌ನನ್ನು ಬಂಧಿಸಲಾಗಿದೆ. ಉಳ್ಳಾಲದ ಇನ್ನೋರ್ವ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ.
ದಾಳಿ ವೇಳೆ ಸಂತ್ರಸ್ತೆಯೋರ್ವಳನ್ನು ರಕ್ಷಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version