ಮನೆಯಿಂದಲೇ ಮತದಾನಕ್ಕೆ ಅವಕಾಶ

0
11

ನವದೆಹಲಿ: 85ವರ್ಷ ದಾಟಿದ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ತಿಳಿಸಿದರು.
ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 85ವರ್ಷ ದಾಟಿದ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಸಲಾಗಿದೆ ಎಂದರು.
ಈ ಬಾರಿ 97 ಕೋಟಿ ಮತದಾರರಿದ್ದು ಇದರಲ್ಲಿ 49 ಕೋಟಿ ಪುರುಷರು, 47.15 ಕೋಟಿ ಮಹಿಳಾ ಮತದಾರರಿದ್ದಾರೆ. 18-19 ವರ್ಷದೊಳಗಿನವರು ಒಟ್ಟಿ 1.82 ಕೋಟಿ ಮತದಾರರಿದ್ದು ಅದರಲ್ಲಿ 85 ಲಕ್ಷ ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 1.98 ಕೋಟಿ ಮತದಾರರು. 88 ಲಕ್ಷ ವಿಶೇಷಚೇತನರು, 2.18 ಶತಾಯುಷಿ ಮತದಾರರಿದ್ದಾರೆ. 10.5 ಲಕ್ಷ ಮತಗಟ್ಟೆಗಳಲ್ಲಿ 55 ಲಕ್ಷ ಇವಿಎಂ ಬಳಕೆ ಮಾಡಲಾಗುತ್ತಿದೆ. ಒಟ್ಟು 1.5 ಕೋಟಿ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Previous articleಬೆಳಗಾವಿಯಲ್ಲಿ ವಿರೋಧ ಇಲ್ಲ, ವದಂತಿ ಅಷ್ಟೇ
Next articleಅಭ್ಯರ್ಥಿ ಕೇಸ್‌ ಬಗ್ಗೆ ಜಾಹೀರಾತು ನೀಡುವುದು ಕಡ್ಡಾಯ