ಕುಷ್ಟಗಿ: ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿ ಆದ ಘಟನೆ ಪಟ್ಟಣದ 7ನೇ ವಾರ್ಡಿನಲ್ಲಿ ಬುಧವಾರ ರಾತ್ರಿ ಜರುಗಿದೆ.
7ನೇ ವಾರ್ಡ್‌ನ ಮಹಮ್ಮದ್ ನವಾಜ್ ಅರೆಕಾರಿ ಇವರಿಗೆ ಸೇರಿದ ಸ್ಕೂಟರ್‌ಗೆ ಅಪರಿಚಿತರು ಬೈಕ್ ಮೂಲಕ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.