Home ತಾಜಾ ಸುದ್ದಿ ಮರಕುಂಬಿ ಪ್ರಕರಣ: 97 ಮಂದಿಗೆ ಜಾಮೀನು

ಮರಕುಂಬಿ ಪ್ರಕರಣ: 97 ಮಂದಿಗೆ ಜಾಮೀನು

0

ಧಾರವಾಡ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣದ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು ಜಾಮೀನು ಮಂಜೂರು ಮಾಡಿದೆ.
ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಜೈಲು ಪಾಲಾಗಿದ್ದವರು ಹೈಕೋರ್ಟ್‌ ಮೊರೆ ಹೋಗಿದ್ದರು .ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ.

Exit mobile version