ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ
ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು,
ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19)
ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.