Home ತಾಜಾ ಸುದ್ದಿ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು

0

ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಅಮಾನವೀಯ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.
ಶನಿವಾರ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎನ್ನಲಾಗಿದೆ. ಮೂರು ಹಸುಗಳ ಕೆಚ್ಚಲು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಹಸುಗಳು ರಾತ್ರಿಯಿಡೀ ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳನ್ನು ಚಾಮರಾಜೇಟೆಯ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Exit mobile version