Home ಸುದ್ದಿ ದೇಶ I.N.D.I.A ಮೈತ್ರಿಕೂಟಕ್ಕೆ ಕನ್ನಡಿಗ ಪ್ರಧಾನಿ ಅಭ್ಯರ್ಥಿ

I.N.D.I.A ಮೈತ್ರಿಕೂಟಕ್ಕೆ ಕನ್ನಡಿಗ ಪ್ರಧಾನಿ ಅಭ್ಯರ್ಥಿ

0

ನವದೆಹಲಿ: ಐಎನ್‌ಡಿಐಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ.
ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ INDIA ಮೈತ್ರಿಕೂಟದ ನಾಲ್ಕನೇ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂಬ ಪ್ರಸ್ತಾಪ ಮಾಡಿದರು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈ ಪ್ರಸ್ತಾಪಕ್ಕೆ ಬೆಂಬಲ ನೀಡಿದರು.

Exit mobile version