ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ್ದ ರಾಮ್ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಹೊರವಲಯದ ಕುಡುಪು ಮನೆಯಲ್ಲಿದ್ದ ಅವರನ್ನು, ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ವಶಕ್ಕೆ ಪೊಲೀಸರು ಪಡೆದಿದ್ದಾರೆ, ಇದಕ್ಕೂ ಮುನ್ನ ಮಸಾಜ್ ಪಾರ್ಲರ್‌ಗೆ ಕಾನೂನು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದರು. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದರು.
ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದರು. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.