ಉಡುಪಿ: ಮಂಗಳೂರಿನಲ್ಲಿ ನಡೆದ ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಸಂಬಂಧವಿಲ್ಲ ಎಂದು ಶ್ರೀರಾಮಸೇನೆ ಮಂಗಳೂರು ಲವಿಭಾಗ ಅಧ್ಯಕ್ಷ ಜಯರಾಮ ಅಂಬೆಕಲ್ಲು ಸ್ಪಷ್ಟಪಡಿಸಿದ್ದಾರೆ.
ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ 70ನೇ ಹುಟ್ಟುಹಬ್ಬ ದಿನಾಚರಣೆ ಪ್ರಯುಕ್ತ ಎಲ್ಲಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪೂಜೆ, ಹವನ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸುತ್ತಿದ್ದಾರೆ. ಹೆಚ್ಚಿನ ಪದಾಧಿಕಾರಿಗಳು ಅಯೋಧ್ಯೆ ಹಾಗೂ ಕುಂಭಮೇಳ ಪ್ರವಾಸದಲ್ಲಿದ್ದಾರೆ. ಮಂಗಳೂರು ಘಟನೆಗೂ ನಮ್ಮ ಸಂಘಟನೆಗೂ ಸಂಬಂಧ ಇಲ್ಲ ಎಂದು ಅಂಬೆಕಲ್ಲು ತಿಳಿಸಿದ್ದಾರೆ.