Home ತಾಜಾ ಸುದ್ದಿ ಮಹತ್ವದ ಸಚಿವ ಸಂಪುಟ ಸಭೆ ಇಂದು

ಮಹತ್ವದ ಸಚಿವ ಸಂಪುಟ ಸಭೆ ಇಂದು

0

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶಿಸಿರುವ ಬೆನ್ನಲ್ಲೇ ಗುರುವಾರ ಮಧ್ಯಾಹ್ನ ೧೨:೩೦ಕ್ಕೆ ನಡೆಯಲಿರುವ ರಾಜ್ಯ ಸಚಿವಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ. ರಾಜಕೀಯ ವಿದ್ಯಮಾನಗಳ ಕಾರಣದಿಂದ ಗಂಭೀರ ಚರ್ಚೆ ನಡೆಯುವ ಸಾಧ್ಯತೆಯಿದ್ದು ಹಲವು ಪ್ರಮುಖ ತೀರ್ಮಾನಗಳನ್ನು ಹೊರಬೀಳುವ ನಿರೀಕ್ಷೆ ಇದೆ. ಹೈಕಮಾಂಡ್‌ನಿಂದ ಮಹತ್ವದ ಸಂದೇಶ ರವಾನೆಯಾಗಿದೆ ಎನ್ನಲಾಗಿದ್ದು ಕ್ಯಾಬಿನೆಟ್ ನಿರ್ಧಾರದ ಬಗ್ಗೆ ಭಾರಿ ಕುತೂಹಲ ಮೂಡಿದೆ.

Exit mobile version