ಮಹದಾಯಿ ವಿಚಾರಣೆ ಮುಂದೂಡಿಕೆ..

ಮಹದಾಯಿ

ಪಣಜಿ: ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಗುರುವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಬರಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಚಾರಣೆಯನ್ನು ಮುಂದೂಡಲಾಗಿದ್ದು ಮುಂದಿನ ವಾರ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಗುರುವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಗೋವಾದ ಪರ ವಾದ ಮಂಡಿಸುತ್ತಿರುವ ಅಡ್ವಕೇಟ್ ಜನರಲ್ ದೇವಿದಾಸ್ ಪಾಂಗಮ್ ಮತ್ತು ಜಲಸಂಪನ್ಮೂಲ ಇಲಾಖೆ ಮುಖ್ಯ ಎಂಜಿನೀಯರ್ ಪ್ರಮೋದ ಬಾದಾಮಿ ದೆಹಲಿಗೆ ತೆರಳಿದ್ದರು. ಆದರೆ ವಿಚಾರಣೆ ನಡೆಯಲಿಲ್ಲ.
ಮಹದಾಯಿ ನದಿ ನೀರು ಹಂಚಿಕೆ ಪ್ರಕರಣವು ಪ್ರಮುಖವಾಗಿ ಗೋವಾ ಮತ್ತು ಕರ್ನಾಟಕದ ನಡುವಿನ ಸಮಸ್ಯೆಯಾಗಿತ್ತು. ಆದರೆ ಇದೀಗ ಈ ಸಮಸ್ಯೆ ಕೇವಲ ಕರ್ನಾಟಕ ಮತ್ತು ಗೋವಾ ನಡುವಿನ ಸಮಸ್ಯೆಯಾಗಿ ಉಳಿದಿಲ್ಲ. ವಿರ್ಡಿ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ನ್ಯಾಯಾಲಯದಲ್ಲಿ ಗೋವಾದ ಪ್ರತಿವಾದಿಯಾಗಿ ಅರ್ಜಿ ಸಲ್ಲಿಸಿದೆ.
ನ್ಯಾಯಾಧೀಶರಾದ ಸಂಜೀವ ಖನ್ನಾ, ನ್ಯಾಯಮೂರ್ತಿ ಸಂಜೀವಕುಮಾರ್, ನ್ಯಾಯಮೂರ್ತಿ ಕೆ.ವಿ.ವಿಶ್ವನಾಥ ಅವರ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.