Home ತಾಜಾ ಸುದ್ದಿ ಮಹದಾಯಿ ವಿಚಾರದಲ್ಲಿ ಏನೂ ಪ್ರತಿಕ್ರಿಯಿಸಲಾರೆ

ಮಹದಾಯಿ ವಿಚಾರದಲ್ಲಿ ಏನೂ ಪ್ರತಿಕ್ರಿಯಿಸಲಾರೆ

0

ಹುಬ್ಬಳ್ಳಿ: ಮಹದಾಯಿ ನೀರಾವರಿ ಯೋಜನೆ ವಿಚಾರವು ಈಗಾಗಲೇ ಕೋರ್ಟ್ನಲ್ಲಿದೆ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ಸೋಮವಾರ ಇಲ್ಲಿನ ವರೂರಿನ ನವಗ್ರಹತೀರ್ಥ ಕ್ಷೇತ್ರದಲ್ಲಿ ನಡೆದ ಮಹಾಮಸ್ತಕಾಭಿಷೇಕದ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ ಈ ರೀತಿ ಪ್ರತಿಕ್ರಿಯಿಸಿದರು.
ಮಹದಾಯಿ ಯೋಜನೆ ಕೋರ್ಟಿನಲ್ಲಿ ವಿಚಾರಣೆ ನಡೆದಿರುವುದರಿಂದ ಈ ಕುರಿತು ಏನೇ ಹೇಳಿಕೆ, ಪ್ರತಿಕ್ರಿಯೆ ನೀಡುವುದು ಕಾನೂನು ಪ್ರಕಾರ ತಪ್ಪಾಗುತ್ತದೆ. ಹೀಗಾಗಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಏನೂ ಪ್ರತಿಕ್ರಿಯೆ ನೀಡಲಾರೆ ಎಂದು ಹೇಳಿದರು.

Exit mobile version