ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್(50) ಮತ್ತು ಅವರ ಪುತ್ರಿ ಮೇಘಾ ಹತ್ತರವಾಠ್ ಹಾಗೂ ಶಿವಾಜಿನಗರದ ನಿವಾಸಿ ಮಹಾದೇವಿ ಹನುಮಂತ ಬಾವನೂರ, ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಮೃತಪಟ್ಟಿದ್ದಾರೆ. ಇನ್ನು ಅರುಣ್ ಪತ್ನಿ ಕಾಂಚನಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

























