Home ಅಪರಾಧ ಮಹಾಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ

ಮಹಾಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ

0

ಪ್ರಯಾಗರಾಜ್: ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಇಂದು ಮತ್ತೊಂದು ಅವಘಡ ಸಂಭವಿಸಿದೆ.
ಸೆಕ್ಟರ್ 22ರ ಜುಸಿ ಪ್ರದೇಶದ ಛತ್ನಾಂಗ್ ಘಾಟ್ ಬಳಿಯಿರುವ ನಾಗೇಶ್ವರ ಪೆಂಡಾಲ್‌ನಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಡೇರೆಗಳು ಸುಟ್ಟು ಬೂದಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಪೆಂಡಾಲ್‌ನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಹೊರಬಂದಿದ್ದು ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Exit mobile version