ಮಹಾತ್ಮ ಗಾಂಧಿ ಮೊಮ್ಮಗ ಇನ್ನಿಲ್ಲ

0
9

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷ ವಯಸ್ಸಿನ ಅರುಣ್‌ ಮನಿಲಾ ಗಾಂಧಿ ಅವರ ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಮಗನಾಗಿ ಜನಿಸಿದ ಇವರು. ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾಗಿ ಸಾಮಾಜಿಕ ಕಾರ್ಯಕರ್ತನಾಗಿ ತಮ್ಮ ಅಜ್ಜ(ಮಹಾತ್ಮಾ ಗಾಂಧಿ)ನ ಹಾದಿಯಲ್ಲಿ ಸಾಗಿದವರು. ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ, ‘ದಿ ಗಿಫ್ಟ್ ಆಫ್ ಆಂಗರ್: ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ’ ಅವರ ಪ್ರಮುಖವಾಗಿದೆ.

Previous articleಭಜರಂಗ ದಳ ನಿಷೇದ ವಿಚಾರಕ್ಕೆ ಮೋದಿ ಕಿಡಿ
Next articleರಾಜ್ಯಕ್ಕೆ ಶ್ರೀಕೃಷ್ಣದೇವರಾಯನ ಮಾದರಿಯ ಅಭಿವೃದ್ಧಿ