ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!!

0
38

ಇದು ಪ್ರಜಾಪ್ರಭುತ್ವ ಸರಕಾರವಲ್ಲ: ದರ ಏರಿಕೆ, ತೆರಿಗೆ ಹೇರಿಕೆ ಸರಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’

🔺 ಹಾಲು ಹಾಲಾಹಲ; 3ನೇ ಸಲ ದರ ಏರಿಕೆ!
2023 ಆಗಸ್ಟ್ ₹3
2024 ಜೂನ್ ₹2
2025 ಮಾರ್ಚ್, ಅಂದರೆ ಈಗ ₹4

🔺 ವಿದ್ಯುತ್ ಶಾಕ್!
ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!!

ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ!

ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ.

🔺 ಇದು ಪ್ರಜಾಪ್ರಭುತ್ವ ಸರಕಾರವಲ್ಲ.
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ!
🔺 ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ.

ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದಿದ್ದಾರೆ.

Previous articleಹೊಸ ಸಮೀಕ್ಷೆ ನಡೆಸುವ ಕಾರ್ಯ ನಾಗಮೋಹನ್ ದಾಸ್ ಸಮಿತಿಗೆ
Next articleಬೆಂಗಳೂರು ತಲುಪುತ್ತಿದೆ ‘ಇಂಡಿ’ಯ ಹೋಳಿಗೆಯ ಬಂಡಿ!