ಗೋಕರ್ಣ: ಪುರಾಣ ಪ್ರಸಿದ್ದ ಮಹಾಬಲೇಶ್ವರ ಮಂದಿರಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಬುಧವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.
ಕ್ಷೀರಾಭಿಷೇಕ, ಪಂಚಾಮೃತ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಮಂದಿರದ ಅರ್ಚಕ ವೇ. ಅಮೃತೇಶ ಹಿರೇ ಪೂಜಾ ಕೈಂಕರ್ಯ ಕೈಗೊಂಡರು. ಮಂದಿರದ ವತಿಯಿಂದ ಸಚಿವರಿಗೆ ಪ್ರಸಾದ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇವೆರಡು ದೇವಾಲಯದ ಭೇಟಿ ಬಳಿಕ ತಾಮ್ರಗೌರಿ ಮಂದಿರಕ್ಕೆ ತೆರಳಿ ದೇವಿ ದರ್ಶನ ಪಡೆದರು.
ಈ ವೇಳೆ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಮಂಕಾಳ ವೈದ್ಯ, ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್, ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಮಹೇಶ ಹಿರೇಗಂಗೆ, ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಿವೇದಿತ ಆಳ್ವಾ, ಇತರರಿದ್ದರು.