ಬೆಳಗಾವಿ(ಯಕ್ಸಂಬಾ): ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದರಿಂದ ತಾಲೂಕಿನ ಪಂಚನದಿಗಳಿಗೆ ೧೮,೧೨೦ ಕ್ಯೂಸೆಕ್ ನೀರು ಇಂದು ಹರಿದು ಬರುತ್ತಿದೆ,
ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಪಶ್ಚಿಮಘಟ್ಟ ಮತ್ತು ಕೊಲ್ಲಾಪುರ ಜಿಲ್ಲೆಯ ರಾಧಾನಗರಿ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ಮತ್ತು ದೂಧಗಂಗಾ ನದಿಗೆ ೧೮,೧೨೦ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ನದಿಗಳ ನೀರಿನ ಏರಿಕೆಯಾಗಿದೆ.
ದೂಧಗಂಗಾ ನದಿಗೆ ೪೫೭೦ ಕ್ಯೂಸೆಕ್ ಮತ್ತು ಕೃಷ್ಣಾ ನದಿಗೆ ೧೩,೫೫೦ ಹೀಗೆ ಒಟ್ಟು ೧೮,೧೨೦ ಕ್ಯೂಸೆಕ್ ನೀರು ರಾಜ್ಯಕ್ಕೆ ಹರಿದು ಬರುತ್ತಿವೆ. ರಾಜ್ಯದ ಗಡಿಭಾಗದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಮಳೆ ಇಲ್ಲದಿದ್ದರೂ ಮಹಾರಾಷ್ಟçದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ದೂಧಗಂಗಾ ಮತ್ತು ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದೆ.

























