ಮಹಾರಾಷ್ಟ್ರದ ನೂತನ ಸರ್ಕಾರಕ್ಕೆ ಶುಭ ಕೋರಿದ ಸಂಸದ ಬಸವರಾಜ ಬೊಮ್ಮಾಯಿ
ದೆಹಲಿ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಮೂಲಕ ಐತಿಹಾಸಿಕ ಬಹುಮತ ಪಡೆದು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ಹಾಗೂ ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವ ಶಿವಸೇನೆಯ ಏಕನಾಥ ಶಿಂಧೆ, ಎನ್ ಸಿಪಿಯ ಅಜಿತ್ ಪವ್ವಾರ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಶುಭಕೋರಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಅವರು, ಮಹಾಯುತಿ ಮೈತ್ರಿ ಸರ್ಕಾರದಿಂದ ಮಹಾರಾಷ್ಟ್ರದ ಅಭಿವೃದ್ಧಿ ಮಾಡುವ ಮೂಲಕ ಮಹಾರಾಷ್ಟ್ರದ ಭವಿಷ್ಯ ಬದಲಾವಣೆಯಾಗಲಿದೆ ಎಂದು ತಿಳಿಸಿದ್ದಾರೆ.