Home ತಾಜಾ ಸುದ್ದಿ ಮಹಾರಾಷ್ಟ್ರ ಚುನಾವಣೆಯಲ್ಲಿ ಹಲವು ಅಕ್ರಮ: ಐದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆ

ಮಹಾರಾಷ್ಟ್ರ ಚುನಾವಣೆಯಲ್ಲಿ ಹಲವು ಅಕ್ರಮ: ಐದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆ

0

ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ಮತದಾರರು

ನವದೆಹಲಿ: ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿ ಇದ್ದರೆ, ಮತದಾರರ ಜನಸಂಖ್ಯೆ ಮಾತ್ರ 9.7 ಕೋಟಿ ಇದೆ. ಮಹಾರಾಷ್ಟ್ರದಲ್ಲಿ ಒಟ್ಟು ವಯಸ್ಕ ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ ಹೇಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಕಾಂಗ್ರೆಸ್, ಶಿವಸೇನೆ-ಯುಬಿಟಿ ಮತ್ತು ಎನ್‌ಸಿಪಿ-ಎಸ್‌ಎಸ್ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ನಡುವೆ ರಾಜ್ಯದಲ್ಲಿ ಒಟ್ಟು 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ ಆರೋಪಿಸಿವೆ. ಲೋಕಸಭೆ ಚುನಾವಣೆಯ ನಂತರ ಐದು ತಿಂಗಳ ಅಂತರದಲ್ಲಿ 39 ಲಕ್ಷ ಮತದಾರರು ಮಹಾರಾಷ್ಟ್ರದಲ್ಲಿ ಸೇರ್ಪಡೆಗೊಂಡರೆ, 2019 ಮತ್ತು 2024ರ ನಡುವಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 32 ಲಕ್ಷ ಮತಗಳು ಸೇರ್ಪಡೆಗೊಂಡಿವೆ. ಈ ಬಗ್ಗೆ ಮತದಾರರ ಪಟ್ಟಿಯನ್ನು ಒದಗಿಸಬೇಕು ಮತ್ತು ಈ ವಿಷಯದ ಬಗ್ಗೆ ಸ್ಪಷ್ಟ ಚಿತ್ರಣ ನೀಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ, ಮಹಾರಾಷ್ಟ್ರದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗವು ನೀಡದಿದ್ದರೆ, ಅದು ಗಂಭೀರ ಪ್ರಶ್ನೆಯನ್ನು ಮುಂದಿಡುತ್ತದೆ ಎಂದರು.

Exit mobile version