ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ

0
29

ಬೆಂಗಳೂರು: ಚಲನಚಿತ್ರ ರಂಗದಲ್ಲಿ ಮಹಿಳೆಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರದಲ್ಲಿ ಈಗಾಗಲೇ ಭರವಸೆ ನೀಡಿದ್ದಾರೆ. ಯಾವುದೇ ದೂರುಗಳು ಕಂಡು ಬಂದರು ಸರ್ಕಾರ, ತಕ್ಷಣ ಕ್ರಮ ಕೈಗೊಳ್ಳಲಿದೆ. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ತಿಳಿಸಿದರು.

Previous articleಮುಡಾ ಹಗರಣದಲ್ಲಿ ಕಾನೂನು ಉಲ್ಲಂಘನೆ ಆಗಿರುವುದು ಸರ್ಕಾರವೇ ಒಪ್ಪಿಕೊಂಡಿದೆ
Next articleಉದ್ಯಮಿ ಕೊಲೆ: ಅತ್ತೆ, ಪತ್ನಿ ಬಂಧನ