ಮಹಿಳೆಯೊಂದಿಗೆ ಪೊಲೀಸ್‌ ಆತ್ಮಹತ್ಯೆ

0
10

ಹುಬ್ಬಳ್ಳಿ: ಎಪಿಎಂಸಿ-ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆಯೊಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸಟೇಬಲ್ ಆಗಿದ್ದ ಮಹೇಶ ಹೆಸರೂರು ಎನ್ನುವವರೇ ಮಹಿಳೆಯೊಂದಿಗೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಒಂದು ವಾರದ ಹಿಂದೆಯೇ ಗಾಮನಗಟ್ಟಿಯಲ್ಲಿ ಬಾಡಿಗೆ ಮನೆಯನ್ನು ಪಡೆದಿದ್ದ ಮಹೇಶ ಎರಡು ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಕಿಟಕಿ ಮೂಲಕ ನೋಡಿದಾಗ ಮಹಿಳೆ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ.

Previous articleಆಂತರಿಕ ಕಚ್ಚಾಟದಿಂದ ಸರ್ಕಾರ ಶೀಘ್ರ ಪತನ
Next articleಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ