ಮಹಿಳೆ ವಿವಸ್ತ್ರ ಪ್ರಕರಣ: ಆರೋಪಿಗಳ ಬಿಡುಗಡೆ, ಸಿಹಿ ಹಂಚಿ ಅದ್ಧೂರಿ ಸ್ವಾಗತ

0
9

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣ ಆರೋಪಿಗಳು ನಾಲ್ಕು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆ ಆಗುತ್ತಿದ್ದಂತೆ ಆರೋಪಿಗಳಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದ ಘಟನೆ ನಡೆದಿದ್ದು ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

2023ರ ಡಿಸೆಂಬರ್​​ 10 ರಂದು ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಪ್ರಕರಣದ 13 ಆರೋಪಿಗಳನ್ನ ಬಂಧಿಸಿ, ಹಿಂಡಲಗಾ ಜೈಲಿನಲ್ಲಿ ಇರಸಿದ್ದರು. ಹೈಕೋರ್ಟ್‌ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆರೋಪಿಗಳು ನಿನ್ನೆ ರಾತ್ರಿ ಜೈಲಿನಿಂದ ಬಿಡುಗಡೆಯಾಗಿದ್ದು, ಜೈಲಿನ ಎದುರೇ ಆರೋಪಿಗಳಿಗೆ ಹೂಮಾಲೆ ಹಾಕಿ, ಸಿಹಿ ತಿನಿಸಿ ಸ್ವಾಗತಿಸಲಾಯಿತು. ಜೈಲಿನ ಎದುರು ನಡೆದ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Previous articleಪಿಕಪ್ ವಾಹನ ಡಿಕ್ಕಿ: ಮೂವರ ದುರ್ಮರಣ
Next articleಸೇನಾ ಹೆಲಿಕಾಪ್ಟರ್ ಡಿಕ್ಕಿ: 10 ಮಂದಿ ಸಾವು