ಪುಣೆ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿಸಿಂಗ್ ಆರ್ ಶೇಖಾವತ್ ಅವರು ಶುಕ್ರವಾರ ಬೆಳಗ್ಗೆ ಪುಣೆಯಲ್ಲಿ ನಿಧನರಾದರು.
ದೇವಿ ಸಿಂಗ್ ಶೇಖಾವತ್ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಪುಣೆಯ ಕೆಇಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಸ್ಥಿತಿ ಹದಗೆಟ್ಟಿತ್ತು. ಅವರು 89 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಂತಿಮ ಸಂಸ್ಕಾರ ಇಂದು (ಶುಕ್ರವಾರ) ಸಂಜೆ 6 ಗಂಟೆಗೆ ಪುಣೆಯಲ್ಲಿ ನಡೆಯಲಿದೆ.