ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು

0
7

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್(೮೯) ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಅವರು ಕಳೆದ ರಾತ್ರಿ ಜ್ವರ ಮತ್ತು ಎದೆ ಸೋಂಕಿನ ಲಕ್ಷಣಗಳೊಂದಿಗೆ ಪುಣೆಯ ಭಾರ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಭಾ ಪಾಟೀಲ್ ಅವರು 2007 ರಿಂದ 2012 ರವರೆಗೆ 12 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಅವರು ದೇಶದ ರಾಷ್ಟ್ರಪತಿಯಾದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿದರು.

Previous articleಲಂಕೆಯಲ್ಲಿ ಯುದ್ಧ ಆರಂಭ….
Next articleಬೆಳಗಾವಿಯಿಂದ ಸ್ಫರ್ಧಿಸುವ ಇಂಗಿತ ವ್ಯಕ್ತಪಡಿಸಿದ ಶೆಟ್ಟರ…