ಮಾಜಿ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ನಿಧನ

0
18

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕೆ. ನಟವರ್ ಸಿಂಗ್ ನಿಧನರಾಗಿದ್ದಾರೆ.
ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರು ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 93 ವರ್ಷದ ನಟವರ್ ಸಿಂಗ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅಲ್ಲಿ ಅವರು ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ‘ದಿ ಲೆಗಸಿ ಆಫ್ ನೆಹರೂ: ಎ ಮೆಮೋರಿಯಲ್ ಟ್ರಿಬ್ಯೂಟ್’ ಮತ್ತು ‘ಮೈ ಚೀನಾ ಡೈರಿ 1956-88’ ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

Previous articleಗೇಟ್ ತಯಾರಿಸಲು ಮುಂಬೈ ಮೂಲದ ಕಂಪನಿಗೆ ಆದೇಶ: ಕಾಡಾ ಅಧ್ಯಕ್ಷ ದೋಟಿಹಾಳ
Next articleಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ