ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ

0
9

ಬೆಂಗಳೂರು: ಹಿರಿಯ ರಾಜಕಾರಣಿ, ಸಮಾಜವಾದಿ ಚಿಂತಕ, ಜನತಾ ಪರಿವಾರದ ಹಿರಿಯ ನಾಯಕ ಕೆ.ಹೆಚ್.ಶ್ರೀನಿವಾಸ್ ಅವರ ನಿಧನರಾಗಿದ್ದಾರೆ.
ರಾಜಕೀಯದ ಜೊತೆಗೆ ಕಲೆ, ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಬಹುಮುಖಿ ವ್ಯಕ್ತಿ ಶ್ರೀನಿವಾಸ್ ಅವರು ಹಳೆಯ ಮತ್ತು ಹೊಸ ತಲೆಮಾರಿನ ರಾಜಕಾರಣದ ಕೊಂಡಿಯಾಗಿದ್ದರು. ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

Previous articleದೇವರಗುಡ್ಡಕ್ಕೆ ಸಿಎಂ ಭೇಟಿ: ದರ್ಶನಕ್ಕೆ ಭಕ್ತರ ಪರದಾಟ
Next articleರೌಡಿಶೀಟರ್ ಕಾಲಿಗೆ ಗುಂಡು