ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಪ್ರತಾಪ್ ಕುಮಾರ್ (41) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್, 15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.