ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನಿಧಿ ದುರ್ಬಳಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜಾಮೀನು ಮಂಜೂರು ಮಾಡಿದ್ದಾರೆ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನಿಧಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನು ಜುಲೈ 12ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.