ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0
10

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಳೆದ ಫೆಬ್ರವರಿ 2 ರಂದು ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿ ಮಹಿಳೆಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ: ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ನಿನ್ನೆ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.

Previous articleತನು ಮನ ಧನಗಳ ಸದ್ಬಳಕೆ
Next articleಉಪಕಾರ ಮಾಡಲು ಹೋದರೆ ಈ ರೀತಿ ಆಗುತ್ತೆ ಅನ್ನೋದೇ ಬೇಸರ