Home ತಾಜಾ ಸುದ್ದಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ನಿಧನ

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ನಿಧನ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ(46) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದರು.
ಭರತನಾಟ್ಯ ಕಲಾವಿದೆ ಆಗಿದ್ದ ಅವರು ಹಲವಾರು ಕಾರ್ಯಕ್ರಮಗಳಲ್ಲಿ ತಮ್ಮ ಕಲೆ ಪ್ರದರ್ಶನ ನೀಡಿದ್ದರು. ಕೇವಲ ಭರತನಾಟ್ಯ ಅಲ್ಲದೆ ಸಿನಿಮಾ ರಂಗದಲ್ಲೂ ಅವರು ಗುರುತಿಸಿಕೊಂಡಿದ್ದರು. ಜೊತೆಗೆ ನೃತ್ಯ ಸಂಯೋಜಕಿಯೂ ಆಗಿದ್ದರು. ಸೋಮವಾರ ಬೆಳಗ್ಗೆ ಅವರ ಅಂತ್ಯಸಂಸ್ಕಾರ ನಡೆಯಲಿದೆ.

Exit mobile version