ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು

0
8

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾನ ಹಾನಿಕರ ಜಾಹೀರಾತು ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ್​ ಗಾಂಧಿ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣ‌ ಸಂಬಂಧಿಸಿದಂತೆ ನಗರದ ಜನ ಪ್ರತಿನಿಧಿಗಳ ವಿಶೇಷ (42ನೇ ಮ್ಯಾಜಿಸ್ಟ್ರೇಟ್) ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡರು. 2023 ರ ಮೇ 5ರಂದು ರಾಜ್ಯದಲ್ಲಿ ಅಂದಿನ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಿವಿಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೋರ್ಟ್​ಗೆ ಹಾಜರಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದರು.
ಜಾಮೀನು ಮಂಜೂರು ಮಾಡಿದ ನ್ಯಾಯಾಲಯ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ. ರಾಹುಲ್ ಗಾಂಧಿ ಅವರಿಗೆ ಡಿ.ಕೆ.ಸುರೇಶ್ 75 ಲಕ್ಷ ರೂಪಾಯಿಗಳ ಶ್ಯೂರಿಟಿ ನೀಡಿದರು.

Previous articleಜಾಣರ ಗುರು
Next articleಖಾಸಗಿ ಬಸ್‌ ಲಾರಿ ನಡುವೆ ಅಪಘಾತ: ಓರ್ವ ಸಾವು