Home News ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ


ಕಲಬುರಗಿ : ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ.

ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ
ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ಮೇಲೆ ತೆರಳುವಾಗ ಇಮ್ರಾನ್ ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.

ಕೊಲೆಯಾದ ವ್ಯಕ್ತಿ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಡಿಸಿಪಿ ಕನಿಕಾ ಸಿಕ್ರಿವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ
ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿ ಬಿಸಿದ್ದಾರೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version