Home ತಾಜಾ ಸುದ್ದಿ ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

0

ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭ

ಬೆಂಗಳೂರು: ಮಾರ್ಚ್​ 7ರಂದು ಬಜೆಟ್ ಮಂಡಿಸುವದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ, ಮಾರ್ಚ್ 7ರ ಶುಕ್ರವಾರ ಬಜೆಟ್ ಮಂಡಿಸಲಾಗುತ್ತದೆ ಎಂದು ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಹೇಳಿದರು. ಈಗಾಗಲೆ ವಿವಿಧ ಇಲಾಖೆಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು. ಇಲಾಖೆಗಳಿಂದ ಮಾಹಿತಿಯನ್ನು ಪಡೆಯಲಾಗಿದೆ.

Exit mobile version