ಮಾಲಾಧಾರಿಗಳ ಶೋಭಾಯಾತ್ರೆ ಶಾಂತಿಯುತ ತೆರೆ

0
28

ಚಿಕ್ಕಮಗಳೂರು: ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮಂಗಳವಾರ ತೆರೆ ಕಾಣಲಿರುವ ದತ್ತಜಯಂತಿ ಉತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಸೋಮವಾರ ನಡೆದ ಶೋಭಾಯಾತ್ರೆ ಶಾಂತಿಯುತವಾಗಿ ನಡೆಯಿತು.
ಪೂರ್ವ ನಿಗದಿಯಂತೆ ಮಧ್ಯಾಹ್ನ ೨.೩೦ಕ್ಕೆ ಹೊರಡಬೇಕಾಗಿದ್ದ ಶೋಭಾಯಾತ್ರೆ ಇಲ್ಲಿನ ಶ್ರೀ ಕಾಮಧೇನು ಗಣಪತಿ ದೇವಸ್ಥಾನದಿಂದ ಹೊರಟಿತು. ಆರಂಭದಲ್ಲಿ ದತ್ತಮಾಲಾಧಾರಿಗಳ ಸಂಖ್ಯೆ ಕಡಿಮೆಯಂತೆ ಕಂಡು ಬಂದರೂ ಟೌನ್ ಕ್ಯಾಂಟಿನ್ ವೃತ್ತದಿಂದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗಿ ಹನುಮಂತಪ್ಪ ವೃತ್ತಕ್ಕೆ ಬರುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಮಾಲಾಧಾರಿಗಳು ರಸ್ತೆಯ ಉದ್ದಕ್ಕೂ ಕಂಡು ಬಂದಿತು.
ತಂಡೋಪ ತಂಡವಾಗಿ ಯಾತ್ರೆಯಲ್ಲಿ ಸಾಗಿದ ಯುವಕರು ಮುಗಿಲು ಮುಟ್ಟುವಂತೆ ಘೋಷಣೆ ಹಾಕುತ್ತಿದ್ದರು, ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆಗೆ ರಸ್ತೆಯ ಉದ್ದಕ್ಕೂ ನಿಂತಿದ್ದ ಸಾರ್ವಜನಿಕರು ಧ್ವನಿ ಗೂಡಿಸುತ್ತಿದ್ದರು. ಶೋಭಾಯಾತ್ರೆಯಲ್ಲಿ ಡಿಜೆ, ಗೊಂಬೆ ಮೇಳ, ಹಳ್ಳಿ ವಾದ್ಯಗಳು ಮಾತ್ರ ಇದ್ದವೂ ಆದರೆ, ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ ಕಲಾ ತಂಡಗಳ ಸಂಖ್ಯೆ ಕಡಿಮೆಯಾಗಿತ್ತು. ನಿರೀಕ್ಷೆಯಷ್ಟು ಮಾಲಾಧಾರಿಗಳು ಭಾಗವಹಿಸಲಿಲ್ಲ. ಚಿಕ್ಕಮಗಳೂರು ನಗರ ಪ್ರದೇಶದ ಯುವಕ, ಯುವತಿಯರು ಹಾಗೂ ಬಿಜೆಪಿಯ ಮುಖಂಡರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Previous articleರೈತರಿಗೆ ಬೆಳೆ ಪರಿಹಾರ ನೀಡಲು ಒತ್ತಾಯ
Next articleಯತ್ನಾಳ ಪರ ಬೆಲ್ಲದ್ ಬ್ಯಾಟಿಂಗ್